ಕರಾವಳಿ

ಕ್ರೀಡಾಪಟುಗಳ ಜವಾಬ್ದಾರಿ ನಮ್ಮದು : ಶಾಸಕ ವೇದವ್ಯಾಸ್ ಕಾಮತ್

Pinterest LinkedIn Tumblr

ಮಂಗಳೂರು  : ಕ್ರೀಡಾಪಟುಗಳು ಒಳ್ಳೆಯ ರೀತಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿ ಯಶಸ್ಸು ಪಡೆಯಿರಿ ಮತ್ತು ಕ್ರೀಡಾಪಟುಗಳಿಗೆ ಯಾವುದೇ ತೊಂದರೆಗಳಾಗದೇ ಇರುವ ಹಾಗೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್ ಹೇಳಿದರು.

ವರು ಜಿಲ್ಲಾಡಳಿತ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಕ್ರಿಡಾ ಪ್ರಾಧಿಕಾರ, ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆದ “ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2019-20” ಸಾಲಿನ 8 ಜಿಲ್ಲೆಗಳ ಎರಡು ದಿನದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಜೀವನ ಎನ್ನುವುದು ರನ್ನಿಂಗ್ ರೇಸ್ ಇದ್ದ ಹಾಗೆ ನಾವು ಸ್ವಲ್ಪ ಎಚ್ಚರ ತಪ್ಪಿದರು ನಾವು ರೇಸ್ ನಿಂದ ಹೊರಬೀಳಬೇಕಾಗುತ್ತದೆ ಮತ್ತು ಕಷ್ಟ ಪಟ್ಟು ಇಲ್ಲಿಯವರೆಗೆ ಬಂದಿದ್ದೀರಿ ಮುಂದೆ ರಾಜ್ಯ-ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸು ಪಡೆಯಿರಿ. ಕ್ರೀಡೆಯಲ್ಲಿ ನಿರಂತರವಾಗಿ ಭಾಗಿಯಾದ್ದೀರಿ ನೀವು ಜೀವನದಲ್ಲಿ ಬಹುದೊಡ್ಡ ಸ್ಥಾನವನ್ನು ಅಲಂಕರಿಸಿ ರುತ್ತೀರಿ ಹಾಗೇ ನಿಮ್ಮಲ್ಲಿ ಸ್ಪರ್ಧಾತ್ಮಕ ಮನೋಭಾವ ಹೊಂದಿಕೊಂಡು ಮುಂದೆ ಸಾಗಿ ಎಂದು ಶಾಸಕರು ಸಲಹೆ ನೀಡಿದರು,

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಆರ್ಥರ್ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಯುವಜನ ಒಕ್ಕೂಟ ಮುಖ್ಯಸ್ಥರು ಸುರೇಶ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಉಪನಿರ್ದೇಶಕರು ಪ್ರದೀಪ್ ಡಿಸೋಜ. ಮತ್ತಿತರರು ಉಪಸ್ಥಿತರಿದ್ದರು.

Comments are closed.