ಕರಾವಳಿ

ಮಹಿಳೆಯರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಕಾರ್ಡ್ ವಿತರಣೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆಯಡಿ ರಚಿಸಿದ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯೆನಪೋಯ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಇವರ ಆಶ್ರಯದಲ್ಲಿ ನಗರ ಪ್ರಾಥಮಿಕ ಆರೋಗ್ಯಕೇಂದ್ರ, ಲೇಡಿಹಿಲ್ ಇಲ್ಲಿ ಹಮ್ಮಿಕೊಳ್ಳಲಾಯಿತು.

ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆಯಡಿ ಎಲ್ಲಾ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಆರೋಗ್ಯ ವಿಮೆಯನ್ನು ಮಾಡಿಸುವುದು ಹಾಗೂ ಪೆÇೀಷಣ್ ಅಭಿಯಾನ ಯೋಜನೆಯಡಿ ಆರೋಗ್ಯ ಮತ್ತು ಪೌಷ್ಟಿಕಾಂಶದ ಅರಿವನ್ನು ಮೂಡಿಸುವ ಮೂಲಕ ಸ್ವಸಹಾಯ ಸಂಘಗಳ ಕುಟುಂಬಗಳನ್ನು ಆರೋಗ್ಯಯುತವನ್ನಾಗಿ ಮಾಡುವುದು ಯೋಜನೆಯ ಉದ್ದೇಶವಾಗಿರುತ್ತದೆ.

ಆರೋಗ್ಯ ತಪಾಸಣಾ ಶಿಬಿರವನ್ನು ಸಾಂಕೇತಿಕವಾಗಿ 10 ಮಹಿಳೆಯರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಆರೋಗ್ಯ ವಿಮೆಯ ಕಾರ್ಡನ್ನು ವಿತರಿಸಿ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಅವರು, ಇಡೀ ಕುಟುಂಬದ ಆರೋಗ್ಯವನ್ನು ಕಾಪಾಡುವ ಮಹಿಳೆ ತನ್ನ ಆರೋಗ್ಯವನ್ನು ಕಾಪಾಡಲು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಸಹಕಾರಿಯಾಗಿದ್ದು, ತಪಾಸಣಾ ಶಿಬಿರದ ಪ್ರಯೋಜನವನ್ನು ಪಡೆಯಲು ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಕರೆ ನೀಡಿದರು.

ಮ.ನ.ಪಾ. ಆಯುಕ್ತರಾದ ಎಸ್.ಅಜಿತ್‍ಕುಮಾರ್ ಹೆಗ್ಡೆ, ಉಪ ಆಯುಕ್ತ ಜಿ. ಸಂತೋಷ್‍ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ|| ರಾಮಕೃಷ್ಣರಾವ್, ತಾಲೂಕು ಆರೋಗ್ಯಾಧಿಕಾರಿ ಡಾ|| ಸುಜಯ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ|| ನವೀನ್‍ಚಂದ್ರ ದೇವಾಡಿಗ, ಯೆನಪೋಯ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ ಪೂನಂ ಉಪಸ್ಥಿತರಿದ್ದರು. ಮ.ನ.ಪಾ. ಸಮುದಾಯ ಸಂಘಟನಾಧಿಕಾರಿಯಾದ ಮಾಲಿನಿ ರೊಡ್ರಿಗಸ್ ಸ್ವಾಗತಿಸಿದರು. ಅಚ್ಚುತ್ ನಾಯಕ್ ವಂದಿಸಿದರು.

Comments are closed.