ಕರಾವಳಿ

ನಿಷೇಧಿತ ಪ್ಲಾಸ್ಟಿಕ್ ಮಾರಾಟ: ಉದ್ದಿಮೆ ಪರವಾನಿಗೆ ರದ್ದು

Pinterest LinkedIn Tumblr

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಿಂದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಕಂಡುಬಂದಲ್ಲಿ ಪ್ರಥಮ ಬಾರಿಗೆ 1000 ರೂ. ದ್ವಿತೀಯ ಬಾರಿಗೆ 2000 ರೂ. ದಂಡವನ್ನು ವಿಧಿಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು. ಮುಂದುವರಿದ್ದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸಿ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು / ಉದ್ದಿಮೆದಾರರು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಲ್ಲಿಸಿ ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.