ಕರಾವಳಿ

ನಾಯಕತ್ವದ ಗುಣ ಮತ್ತು ತಂಡ ರಚನೆಯಲ್ಲಿ ವಿದ್ಯಾರ್ಥಿಗಳ ಪಾತ್ರ : ಉಪನ್ಯಾಸ ಕಾರ್ಯಕ್ರಮ

Pinterest LinkedIn Tumblr

ಮಂಗಳೂರು : ಡಾ.ಪಿ ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯ ಅಂಗವಾಗಿ ಎರಡು ದಿನದ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರದಲ್ಲಿ “ನಾಯಕತ್ವದ ಗುಣ ಮತ್ತು ತಂಡ ರಚನೆಯಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಜರುಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಅತಿಥಿ ಉಪನ್ಯಾಸಕರು, ವ್ಯಕ್ತಿತ್ವ ವಿಕಸನದ ತರಬೇತಿದಾರರು ಮತ್ತು ಯುವ ಉದ್ಯಮಿ ಡಾ. ರಶ್ಮಿ ಕೋಡಿಕಲ್ ಭಾಗವಹಿಸಿದ್ದು, “ನಾಯಕತ್ವದ ಗುಣ ಮತ್ತು ತಂಡ ರಚನೆಯಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ಸತತ ಪರಿಶ್ರಮ ಹಾಗೂ ಸೇವಾ ಮನೋಭಾವದಿಂದ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಾಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಹಾಗೂ ಸ್ವ ಪ್ರೇರಣೆಯಿಂದ ಮುನ್ನುಗ್ಗಿದಾಗ ಮಾತ್ರ ಉತ್ತಮ ನಾಯಕತ್ವದ ಗುಣಗಳನ್ನು ಪಡೆಯಲು ಸಾಧ್ಯ ಮತ್ತು ತಂಡ ರಚನೆಯಲ್ಲಿ ತೊಡಗಿಸಿಕೊಂಡಾಗ ತನ್ನಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತರಲು ಸಾಧ್ಯ ಎಂದು ಅವರು ಹೇಳಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಜಯಕರ ಭಂಡಾರಿ ಎಂ. ಉಪಸ್ಥಿತರಿದ್ದರು. ಎನ್.ಎಸ್.ಎಸ್ ಸಂಚಾಲಕ ಪ್ರೊ.ಶೇಷಪ್ಪ.ಕೆ ಶಿಬಿರದ ಮಹತ್ವ ಮತ್ತು ಸ್ವಚ್ಛತ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

Comments are closed.