ಕುಂದಾಪುರ: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ತಾಲೂಕಿನ ಶಿರೂರು ಸಮೀಪದ ಸಂಕದಗುಂಡಿ ಸೇತುವೆ ಬಳಿ ಗುರುವಾರ ರಾತ್ರಿ 7 ಗಂಟೆಯ ಸುಮಾರಿಗೆ ನಡೆದಿದೆ.

ಭಟ್ಕಳದಿಂದ ಉಡುಪಿ ಕಡೆ ಸಾಗುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಕಾರವಾರದ ಕಡೆಗೆ ತೆರಳುತ್ತಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುನುಜ್ಜಾಗಿದೆ. ಕಾರಿನಲ್ಲಿ ಇರ್ವರು ಪ್ರಯಾಣಿಸುತ್ತಿದ್ದು ಇನ್ನೊರ್ವ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಉಡುಪಿ ಕುಂದಾಪುರದ ಮೂಲದವರೆಂದು ಗುರುತಿಸಲಾಗಿದ್ದು ವಂಡ್ಸೆಯ ನಿತೇಶ್ (23) ಸಾವನ್ನಪ್ಪಿದ್ದಾರೆ.
ಸಂಜೆ ವೇಳೆ ಬಾರಿ ಮಳೆ ಸುರಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.ಬಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.