ಕರಾವಳಿ

ಉಚಿತ ಸಾಮೂಹಿಕ ವಿವಾಹಕ್ಕೆ ಮುಜರಾಯಿ ಇಲಾಖೆಯಿಂದ ಹೊಸ ಯೋಜನೆ ಜಾರಿಗೆ

Pinterest LinkedIn Tumblr

ಬೆಂಗಳೂರು: ರಾಜ್ಯದ 100 ದೇವಾಲಯಗಳಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ.

ಬಡವರು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿ ವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.

ರಾಜ್ಯದ ಆಯ್ದ 100 ಎ ದರ್ಜೆಯ ಮುಜರಾಯಿ ದೇವಾಲಯಗಳಲ್ಲಿ ವರ್ಷಕ್ಕೆ ಒಮ್ಮೆ ಸಾಮೂಹಿಕ ವಿವಾಹ ಆಯೋಜಿಸಲಿದ್ದು, 8 ಗ್ರಾಂ ಚಿನ್ನದ ಮಾಂಗಲ್ಯ, ವಧು -ವರರಿಗೆ ಬಟ್ಟೆ ನೀಡುವ ಜೊತೆಗೆ ವಿವಾಹ ನೋಂದಣಿ ಮಾಡಿಸಿ ಕೊಡಲಾಗುವುದು.

ರಾಜ್ಯದ ಪ್ರಮುಖ ದೇವಾಲಯಗಳಾಗಿರುವ ಮಲೆಮಹದೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡೇಶ್ವರಿ ದೇವಾಲಯ, ಕೊಲ್ಲೂರು ಮೂಕಾಂಬಿಕಾ ದೇವಾಲಯ ಸೇರಿದಂತೆ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಚಿಂತನೆ ಇದೆ.
ದೇವಾಲಯದಲ್ಲಿ ಸಂಗ್ರಹವಾಗುವ ಆದಾಯ ಮತ್ತು ಸರ್ಕಾರದ ಅನುದಾನದಿಂದ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗುವುದು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಶೀಘ್ರವೇ ಯೋಜನೆ ಜಾರಿಗೆ ಬರಲಿ ಎಂದು ಹೇಳಲಾಗಿದೆ.

Comments are closed.