ಕರಾವಳಿ

ಉಡುಪಿ ಜಿಲ್ಲೆಯ ಕೆಲವು ಕಡೆ ಉಪ ಚುನಾವಣೆ-ಮದ್ಯ ಮಾರಾಟ ನಿಷೇಧ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಡುಪಿ ತಾಲೂಕು ಪಂಚಾಯತ್ 4 ನೇ ಬಾರ್ಕೂರು ಕ್ಷೇತ್ರದ ತಾಲೂಕು ಪಂಚಾಯತ್ ನಲ್ಲಿ ಹಾಗೂ ಕಾಪು ತಾಲೂಕು ಕಟಪಾಡಿ, ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ, ಕಾರ್ಕಳ ತಾಲೂಕಿನ ಮುಂಡ್ಕೂರು ಹಾಗೂ ಕಲ್ಯಾ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಉಪಚುನಾವಣೆ ನಡೆಯಲಿದ್ದು, ಈ ಎಲ್ಲಾ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರಿಂದ ನವೆಂಬರ್ 14 ರ ವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ.

ಚುನಾವಣೆಯು ಶಾಂತ ಮತ್ತು ಮುಕ್ತವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇಲೆ ಹೇಳಿದ ಎಲ್ಲಾ ಗ್ರಾಮ ಪಂಚಾಯತ್ಗಳ ಹಾಗೂ ಬಾರ್ಕೂರು ತಾಲೂಕು ಪಂಚಾಯತ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಒಣದಿನವೆಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ದಿನಗಳಂದು ಮೇಲೆ ತಿಳಿಸಿರುವ ಗ್ರಾಮ ಪಂಚಾಯತ್ ಹಾಗೂ ಬಾರ್ಕೂರು ತಾಲೂಕು ಪಂಚಾಯತ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸನ್ನದುಗಳನ್ನು ಮುಚ್ಚಿ ಮೊಹರು ಮಾಡಿ ಅವುಗಳ ಕೀಯನ್ನು ಸಂಬಂಧಪಟ್ಟ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ವಶಕ್ಕೆ, ಉಡುಪಿ ಡೆಪ್ಯೂಟಿ ಕಮಿಷನರ್ ಆಫ್ ಎಕ್ಸೈಸ್ ಇವರಿಗೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.