ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಡುಪಿ ತಾಲೂಕು ಪಂಚಾಯತ್ನ 4 ನೇ ಬಾರ್ಕೂರು ಕ್ಷೇತ್ರದ ತೆರವಾಗಿರುವ 1 ಸ್ಥಾನಕ್ಕೆ ಹಾಗೂ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನ, ಕಾಪು ತಾಲೂಕಿನ ಕಟಪಾಡಿ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನ, ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನ ಹಾಗೂ ಕಲ್ಯಾ ಗ್ರಾಮ ಪಂಚಾಯತ್ನ 3 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿ, ಚುನಾವಣಾ ವೇಳಾಪಟ್ಟಿಯನ್ನು ನಿಗಧಿಪಡಿಸಿರುತ್ತದೆ.

(ಸಾಂದರ್ಭಿಕ ಚಿತ್ರ)
ಬ್ರಹ್ಮಾವರ ತಾಲೂಕಿನ ಉಡುಪಿ ತಾಲೂಕು ಪಂಚಾಯತ್ ತೆರವಾಗಿರುವ 4 ನೇ ಬಾರ್ಕೂರು ಕ್ಷೇತ್ರಕ್ಕೆ ಹಿಂದುಳಿದ ವರ್ಗ “ಬ” ಅಭ್ಯರ್ಥಿಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.
ಕಾಪು ತಾಲೂಕು ಕಟಪಾಡಿ ಗ್ರಾಮ ಪಂಚಾಯತ್ನ ತೆರವಾಗಿರುವ ಯೇಣಗುಡ್ಡೆ-1 ಕ್ಷೇತ್ರಕ್ಕೆ ಹಿಂದುಳಿದ ವರ್ಗ ಅ (ಮಹಿಳೆ), ಬ್ರಹ್ಮಾವರ ತಾಲೂಕು ಬಿಲ್ಲಾಡಿ ಗ್ರಾಮ ಪಂಚಾಯತ್ನ ತೆರವಾಗಿರುವ ಬಿಲ್ಲಾಡಿ-1 ಕ್ಷೇತ್ರಕ್ಕೆ ಹಿಂದುಳಿದ ವರ್ಗ ಬ, ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮ ಪಂಚಾಯತ್ನ ತೆರವಾಗಿರುವ ಮುಲ್ಲಡ್ಕ ಕ್ಷೇತ್ರಕ್ಕೆ ಹಿಂದುಳಿದ ವರ್ಗ-ಅ, ಕಾರ್ಕಳ ತಾಲೂಕು ಕಲ್ಯಾ ಗ್ರಾಮ ಪಂಚಾಯತ್ನ ತೆರವಾಗಿರುವ ಕಲ್ಯಾ-3 ಕ್ಷೇತ್ರಕ್ಕೆ ಹಿಂದುಳಿದ ವರ್ಗ-ಅ(ಮಹಿಳೆ), ಕಾರ್ಕಳ ತಾಲೂಕು ಕಲ್ಯಾ ಗ್ರಾಮ ಪಂಚಾಯತ್ನ ತೆರವಾಗಿರುವ ಕಲ್ಯಾ-3 ಕ್ಷೇತ್ರಕ್ಕೆ ಪರಿಶಿಷ್ಟ ಪಂಗಡ(ಮಹಿಳೆ), ಕಾರ್ಕಳ ತಾಲೂಕು ಕಲ್ಯಾ ಗ್ರಾಮ ಪಂಚಾಯತ್ನ ತೆರವಾಗಿರುವ ಕಲ್ಯಾ-3 ಕ್ಷೇತ್ರಕ್ಕೆ ಸಾಮಾನ್ಯ ಅಭ್ಯರ್ಥಿಗಳಿಗೆ ಮೀಸಲಾತಿ ನಿಗಧಿಪಡಿಸಲಾಗಿದೆ.
ತಾಲೂಕು ಪಂಚಾಯತ್ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದ ನಾಮಪತ್ರಗಳನ್ನು ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಹಾಗೂ ಗ್ರಾಮ ಪಂಚಾಯತ್ಗೆ ಸಂಬಂಧಿಸಿದ ನಾಮಪತ್ರಗಳನ್ನು, ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಚುನಾವಣಾಧಿಕಾರಿಯವರು ಸ್ವೀಕರಿಸಲಿರುವರು.
ಅಕ್ಟೋಬರ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 31 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ನವೆಂಬರ್ 2 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ನವೆಂಬರ್ 4 ಕೊನೆಯ ದಿನಾಂಕ. ನವೆಂಬರ್ 12 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.
ಉಪಚುನಾವಣೆ ನಡೆಯುವ ಉಡುಪಿ ತಾಲೂಕು ಪಂಚಾಯತ್ ಬಾರ್ಕೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಗೂ ಗ್ರಾಮ ಪಂಚಾಯತ್ ಉಪ ಚುನಾವಣೆ ನಡೆಯುವ ಕಾಪು ತಾಲೂಕು ಕಟಪಾಡಿ ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್ ಹಾಗೂ ಕಲ್ಯಾ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರಿಂದ ನವೆಂಬರ್ 14 ರ ವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ.
ತಾಲೂಕು ಪಂಚಾಯತ್ ಉಪ ಚುನಾವಣೆಯನ್ನು ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ನಡೆಸಲಿದ್ದು, ಮತಯಂತ್ರದಲ್ಲಿ ನೋಟಾ ಅವಕಾಶವನ್ನು ಕಲ್ಪಿಸಲಾಗಿದೆ ಹಾಗೂ ಗ್ರಾಮ ಪಂಚಾಯತ್ ಉಪ ಚುನಾವಣೆಯನ್ನು ಮತಪೆಟ್ಟಿಗೆಗಳ ಮೂಲಕ ಚುನಾವಣೆಯನ್ನು ನಡೆಸಲಾಗುತ್ತಿದ್ದು, ಮತ ಪತ್ರಗಳಲ್ಲಿ ನೋಟಾ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
Comments are closed.