ಕರಾವಳಿ

ಮಣಿಪಾಲದಲ್ಲಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿಯವರ ಕಚೇರಿ ಉದ್ಘಾಟನೆ

Pinterest LinkedIn Tumblr

ಉಡುಪಿ: ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು , ರಾಜ್ಯದ ಗೃಹ ಮತ್ತು ಸಹಕಾರ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು. ನಂತರ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಕರಾವಳಿ ಕಾವಲು ಪೊಲೀಸ್ ಎಸ್ಪಿ ಚೇತನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

Comments are closed.