ಕರಾವಳಿ

ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ-ಆದೇಶ ಹಿಂತೆಗೆತ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಡುಪಿ ತಾಲೂಕು ಪಂಚಾಯತ್ನ 4 ನೇ ಬಾರ್ಕೂರು ಕ್ಷೇತ್ರದ ತಾಲೂಕು ಪಂಚಾಯತ್ನಲ್ಲಿ ಹಾಗೂ ಕಾಪು ತಾಲೂಕು ಕಟಪಾಡಿ, ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ, ಕಾರ್ಕಳ ತಾಲೂಕಿನ ಮುಂಡ್ಕೂರು ಹಾಗೂ ಕಲ್ಯಾ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ನವೆಂಬರ್ 12 ರಂದು ಉಪಚುನಾವಣೆ ನಡೆಯಲಿದ್ದು, ಈ ಎಲ್ಲಾ ಗ್ರಾಮ ಪಂಚಾಯತ್ಗಳ ಹಾಗೂ ಬಾರ್ಕೂರು ತಾಲೂಕು ಪಂಚಾಯತ್ನ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರಿಂದ ನವೆಂಬರ್ 14 ರ ವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಸದ್ರಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಣದಿನವೆಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಆದೇಶ ಹೊರಡಿಸಲಾಗಿರುತ್ತದೆ.

(ಜಿಲ್ಲಾಧಿಕಾರಿ ಜಿ. ಜಗದೀಶ್)

ಚುನಾವಣಾ ಆಯೋಗದ ಚುನಾವಣಾ ವೇಳಾಪಟ್ಟಿಯಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ನಾಮಪತ್ರಗಳನ್ನು ಹಿಂಪಡೆಯಲು ನವೆಂಬರ್ 4 ರ ವರೆಗೆ ಅವಕಾಶವಿರುತ್ತದೆ. ಆ ದಿನಾಂಕದಲ್ಲಿ ಕಾಪು ತಾಲೂಕಿನ ಕಟಪಾಡಿ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತ್ಗಳ ಒಂದೊಂದು ಸದಸ್ಯ ಸ್ಥಾನಕ್ಕೆ ಒಬ್ಬಬ್ಬ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸ್ವೀಕೃತಿಯಾಗಿದ್ದು, ಆಯಾಯ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ಕಣದಲ್ಲಿ ಉಳಿದಿರುವುದರಿಂದ ಅವಿರೋಧ ಆಯ್ಕೆಯಾಗಿರುತ್ತದೆ.

ಆದ್ದರಿಂದ ಕಾಪು ತಾಲೂಕಿನ ಕಟಪಾಡಿ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತ್ಗಳ ಒಂದು ಸದಸ್ಯ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಗೆ ಅಂತಿಮವಾಗಿ ಕಣದಲ್ಲಿ ಒಬ್ಬ ಅಭ್ಯರ್ಥಿ ಇರುವುದರಿಂದ ಹಾಗೂ ಈ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯದೇ ಇರುವುದರಿಂದ ಆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅ. 24ರಂದು ಮದ್ಯ ಮಾರಾಟ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.