ಮಂಗಳೂರು ನವೆಂಬರ್30 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ನಡೆಯಲಿರುವ ಉತ್ಸವಾದಿ ಕಾರ್ಯಕ್ರಮಗಳು ನವೆಂಬರ್ 24 ರಿಂದ ಆರಂಭಗೊಂಡು ಡಿಸೆಂಬರ್2 ರವರೆಗೆ ನಡೆಯಲಿದ್ದು, ಮುಖ್ಯ ರಥೋತ್ಸವಗಳು ನವೆಂಬರ್ 30 ರಿಂದ ಡಿಸೆಂಬರ್ 2 ರವರೆಗೆ ನಡೆಯಲಿದೆ.
ಈ ಸಮಯದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರ್ & ರೆಸ್ಟೋರೆಂಟ್‍ಗಳನ್ನು ನವೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 2 ಮಧ್ಯರಾತ್ರಿ 12 ಗಂಟೆವರೆಗೆ ಮುಚ್ಚಲು ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧು ಬಿ ರೂಪೇಶ್ ಆದೇಶಿಸಿದ್ದಾರೆ.
Comments are closed.