ಕರಾವಳಿ

ಡಿ. 31 ರೊಳಗೆ ಪಾನ್ ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ.

Pinterest LinkedIn Tumblr

ಮಂಗಳೂರು:  ಸೆಪ್ಟೆಂಬರ್ 30 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬೇಕೆಂದು ಈ ಮೊದಲು ಸೂಚನೆ ನೀಡಲಾಗಿತ್ತು. ಬಳಿಕ ಈ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ. ಪಾನ್ ಕಾರ್ಡ್ ನೊಂದಿಗೆ ಆಧಾರ್ ಲಿಂಕ್ ಮಾಡದಿದ್ದರೆ ರದ್ದಾಗಲಿದೆ.

ಪಾನ್ ಕಾರ್ಡ್ ಹೊಂದಿದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪಾನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದ್ದು, ಡಿಸೆಂಬರ್‌ 31 ಅಂತಿಮ ದಿನವಾಗಿತ್ತು.

ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ ಭರ್ತಿ ಮಾಡಬೇಕು. ಬಳಿಕ ಕ್ಯಾಪ್ಚಾ ಕೋಡ್ ನಮೂದಿಸಿ ‘ಲಿಂಕ್ ಆಧಾರ್’ ಎಂಬುದನ್ನು ಕ್ಲಿಕ್ ಮಾಡಿದರೆ ಸಾಕು.

ಇನ್ನು ಎಸ್‌ಎಂಎಸ್ ಮೂಲಕವೂ ಲಿಂಕ್ ಮಾಡಬಹುದು. ಆಧಾರ್ ಕಾರ್ಡ್‌ಗೆ ರಿಜಿಸ್ಟರ್ಡ್ ಆದ ನಂಬರ್ ಇರುವ ಫೋನ್‌ನಲ್ಲಿ UIDPAN ಎಂದು ಟೈಪ್ ಮಾಡಿ ಸ್ಪೇಸ್ ಕೊಟ್ಟು 12 ಡಿಜಿಟ್ ಆಧಾರ್ ನಂಬರ್ ನಮೂದಿಸಿ ಸ್ಟೇಸ್ ಕೊಟ್ಟು 10 ಡಿಜಿಟ್ ಪಾನ್ ನಂಬರ್ ನಮೂದಿಸಬೇಕು. ಬಳಿಕ ಅದನ್ನು 567678 ಗೆ ಎಸ್‌ಎಂಎಸ್ ಮಾಡಬೇಕು.

Comments are closed.