ಕರಾವಳಿ

ಮತದಾರರರ ಪಟ್ಟಿಯಿಂದ ಅರ್ಹ ಮತದಾರ ತಪ್ಪದಂತೆ ಎಚ್ಚರ ವಹಿಸಿ: ಮೌನೀಶ್ ಮುದ್ಗಿಲ್

Pinterest LinkedIn Tumblr

ಉಡುಪಿ: ಜಿಲ್ಲೆಯ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ, ಮತದಾರರ ಪಟ್ಟಿಯ ಪರಿಶೀಲನೆ, ಸೇರ್ಪಡೆ ಹಾಗೂ ತಿದ್ದುಪಡಿಯನ್ನು ಮಾಡುವಂತೆ ಆಯುಕ್ತರು, ಭೂ ಮಾಪನ ಮತ್ತು ಪದ ನಿಮಿತ್ತ ನಿರ್ದೇಶಕರು ಭೂಮಿ ಹಾಗೂ ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಮೌನೀಶ್ ಮುದ್ಗಿಲ್ ಸೂಚಿಸಿದ್ದಾರೆ.ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸುವಂತೆ ಸೂಚಿಸಿದ ಮೌನೀಶ್ ಮೌದ್ಗಿಲ್, ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ವ್ಯಕ್ತಿಗಳ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗುವ ಪ್ರಕರಣಗಳು ಕಂಡು ಬರುತ್ತಿದ್ದು, ಜಿಲ್ಲೆಯ ಗಣ್ಯ ವ್ಯಕ್ತಿಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರು ಸೇರಿದಂತೆ ಯಾವುದೇ ರಾಜಕೀಯ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವಂತೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಕಾರ್ಯಕ್ರಮದಲ್ಲಿ 100% ಗುರಿ ಸಾಧಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರರು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Comments are closed.