ಕರಾವಳಿ

ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಜೋಡಣೆ ಕಡ್ಡಾಯ

Pinterest LinkedIn Tumblr

ಮಂಗಳೂರು ಡಿಸೆಂಬರ್ 04 : 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿದ ಬ್ಯಾಂಕ್ ಖಾತೆಯ ಸಂಖ್ಯೆಗೆ ಮಾತ್ರ ಆಧಾರ್ ಸಂಖ್ಯೆಯನ್ನು ಡಿಸೆಂಬರ್ 7 ರೊಳಗೆ ಜೋಡಣೆ (ಆಧಾರ್ ಸೀಡಿಂಗ್) ಮಾಡಿಸಬೇಕು.

ಇದನ್ನು ಹೊರತು ಪಡಿಸಿ ಬೇರೆ ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಮಾಡಿದ್ದಲ್ಲಿ ಮತ್ತು ಆಧಾರ್ ಕನ್ಸಂಟ್ (ಆಧಾರ್ ಒಪ್ಪಿಗೆ ಪತ್ರ) ಸಲ್ಲಿಸದೇ ಇದ್ದಲ್ಲಿ ಇಲಾಖೆಯಿಂದ ವಿದ್ಯಾರ್ಥಿವೇತನ ಪಾವತಿಸಲಾಗುವುದಿಲ್ಲ ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.