ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಅಧಿಸೂಚನೆ ಸಂಖ್ಯೆ ಅಪಜೀ.17.ಇಪಿಸಿ/2012 ದಿನಾಂಕ 11.03.2016 ಇದರ ನಿರ್ದೇಶನಾ ರಿತ್ಯಾ ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಮತ್ತು ಮಾರಾಟಗಾರರು, ಯಾವುದೇ ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಚೀಲಗಳು, ನಾನ್-ಓವೆನ್ ಚೀಲಗಳು, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್ ಮೈಕೋ ಬೀಡ್ಸ್ನಿಂದ ತಯಾರಾದಂತಹ ಮೇಲ್ಕಂಡ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ರಾಜ್ಯಾದ್ಯಂತ ನಿಷೇದಿಸಲಾಗಿದ್ದು. ಅಕ್ಟೋಬರ್-02, 2019 ರಿಂದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಕಂಡುಬಂದಲ್ಲಿ ಪ್ರಥಮ ಬಾರಿಗೆ 1000 ರೂ., ದ್ವೀತಿಯ ಬಾರಿಗೆ 2000 ರೂ., ದಂಡವನ್ನು ವಿಧಿಸಿ ನಿಷೇದಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.
ಆದರೆ ಉಡುಪಿ ನಗರಸಭಾ ವ್ಯಾಪ್ತಿಯ ವಿಶ್ವೇಶ್ವರಯ್ಯ ದಿನವಹಿ ಮಾರುಕಟ್ಟೆ, ಸಂತೆಕಟ್ಟೆ ಮಾರುಕಟ್ಟೆ, ಪರ್ಕಳ ಮಾರುಕಟ್ಟೆ, ಆದಿಉಡುಪಿ ಎಪಿಎಂಸಿ ಮಾರುಕಟ್ಟೆ ಮತ್ತು ಬೀದಿ ಬೀದಿ ವ್ಯಾಪಾರಸ್ಥರಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಕಂಡುಬಂದಿದ್ದು, ಈ ಬಗ್ಗೆ ಶನಿವಾರದಂದು ಸಂತೆಮಾರುಕಟ್ಟೆಯ ಸುಂಕ ವಸೂಲಿಯ ಗುತ್ತಿಗೆದಾರರು ಮತ್ತು ಎಪಿಎಂಸಿ ಮಾರುಕಟ್ಟೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ಬಳಕೆ ಮತ್ತು ಮಾರಾಟ ಕಂಡುಬಂದಲ್ಲಿ ಎಲ್ಲಾ ವ್ಯಾಪಾರಸ್ಥರಿಗೆ ವಿಧಿಸುವ ದಂಡವನ್ನು ನೇರವಾಗಿ ಸುಂಕ ವಸೂಲಿ ಮಾಡುವ ಗುತ್ತಿಗೆದಾರರಿಂದ ದಂಡ ವಹಿಸಲಾಗುವುದು ಮತ್ತು ನಿಷೇದಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತ ಆನಂದ ಕಲ್ಲೋಳಿಕರ್ ಎಚ್ಚರಿಕೆ ನೀಡಿದರು,
ಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಕರುಣಾಕ ರವಿ ಉಪಸ್ಥಿತರಿದ್ದರು.
Comments are closed.