ಕರಾವಳಿ

ಸರ್ಕಾರಿ ಕೆಲಸಗಳಲ್ಲಿ ತೊಂದರೆಯಾದರೆ ಲೋಕಾಯುಕ್ತ ದೂರು ನೀಡಿ..

Pinterest LinkedIn Tumblr

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಡಿ. 21 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಡಿ. 23 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರ ಹಾಗೂ ಡಿ. 24 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು. ಉಡುಪಿ ತಾಲೂಕಿಗೆ ಸಂಬಂದಪಟ್ಟಂತೆ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರಿಗೆ ತಮ್ಮ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ ಸಂಖ್ಯೆ 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂರವಾಣಿ ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Comments are closed.