ಉಡುಪಿ: ಪೇಜಾವರ ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಗುರುವಾರ ಅನಾರೋಗ್ಯದ ಹಿನ್ನೆಲೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳುರು-ತಿರುಪತಿ ಪ್ರವಾಸದ ವೇಳೆ ಶ್ರೀಗಳಿಗೆ ಶೀತ ಕಾಣಿಸಿಕೊಂಡಿತ್ತು. ಗುರುವಾರ ಪೇಜಾವರ ಸ್ವಾಮೀಜಿಗಳಿಗೆ ಉಸಿರಾಟದ ಸಮಸ್ಯೆ ಹೆಚ್ಚಿದ ಹಿನ್ನಲೆಯಲ್ಲಿ ಮಣಿಪಾಲದ ಕೆ.ಎಮ್.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
Comments are closed.