ಉಡುಪಿ: ಉಸಿರಾಟದ ಸಮಸ್ಯೆಯಿಂದ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಆರೋಗ್ಯ ಪರಿಸ್ಥಿತಿ ಯಾವುದೇ ಸುಧಾರಣೆ ಕಂಡಿಲ್ಲ ಎನ್ನಲಾಗಿದೆ.
ಭಾನುವಾರ ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ನೀಡಿದ ಹೆಲ್ತ್ ಬುಲೇಟಿನ್ ನಲ್ಲಿ ತಿಳಿಸಲಾಗಿದೆ. ಶ್ರೀಗಳಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ.
ನಿನ್ನೆ ದಿನ ಸಿಎಂ ಬಿ.ಎಸ್. ಯಡಿಯೂರಪ್ಪ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹಿತ ಜನಪ್ರತಿನಿಧಿಗಳು, ಹಲವು ಗಣ್ಯರು ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
Comments are closed.