ಉಡುಪಿ: ಪೇಜಾವರ ವಿಶ್ವೇಶ ತೀರ್ಥ ಶ್ರೀಗಳಿಗೆ ಚಿಕಿತ್ಸೆ ನೀಡಲು ದೆಹಲಿ ಏಮ್ಸ್ ವೈದ್ಯರ ನೆರವು ಪಡೆಯಲಾಗಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಶ್ರೀಗಳ ಆರೋಗ್ಯಸ್ಥಿತಿ ಗಂಭೀರವಾಗಿಯೇ ಇದೆ. ಐಸಿಯುವಿನಲ್ಲಿಯೇ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು ಭಾನುವಾರ ಬೆಂಗಳೂರಿನಿಂದ ತಜ್ಞ ವೈದ್ಯರ ತಂಡ ಇಲ್ಲಿಗೆ ಆಗಮಿಸಿದೆ ಎಂದು ಹೇಳಿದ್ದಾರೆ.
ಮಣಿಪಾಲ ವೈದ್ಯರು ನವದೆಹಲಿಯ ಏಮ್ಸ್ ತಜ್ಞರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸೋಮವಾರ ಸಂಜೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಮೂಲಕ ತಿಳಿಸಿದೆ.
Comments are closed.