ಕರಾವಳಿ

ಪೇಜಾವರ ಶ್ರೀ ನಿಧನ- ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿಎಂ ಬಿ.ಎಸ್.ವೈ

Pinterest LinkedIn Tumblr

ಉಡುಪಿ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಆಚರಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಆಚರಿಸಲು ಸೂಚಿಸಲಾಗಿದೆ. ಅಲ್ಲದೆ ಅವರನ್ನು ಬೆಂಗಳೂರಿನ ಮೂಲ ಮಠದಲ್ಲಿ ಅಂತ್ಯ ಸಂಸ್ಕಾರ ಮಾಡಬೇಕಿರುವುದರಿಂದ ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಬೇಕಿದೆ.

ಭಾನುವಾರ ಸಂಜೆ ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಮಾಹಿತಿ ನೀಡಿದರು.

Comments are closed.