ಕರಾವಳಿ

ಫೆ.1, 2ರಂದು ಉಡುಪಿಯ ಮಲ್ಪೆ ಬೀಚ್ ಉತ್ಸವ

Pinterest LinkedIn Tumblr

ಉಡುಪಿ : ಮುಂದೂಡಲ್ಪಟ್ಟಿದ್ದ ಮಲ್ಪೆ ಬೀಚ್ ಉತ್ಸವವು ಫೆಬ್ರವರಿ 1 ಮತ್ತು 2 ರಂದು ನಡೆಯಲಿದೆ. ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನಿರ್ಮಿತಿ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ, ಪಶುಪಲನಾ ಇಲಾಖೆ ಹಾಗೂ ಸ್ಥಳಿಯ ಸಂಘ ಸಂಸ್ಥೆಗಳ ವತಿಯಿಂದ ಬೀಚ್ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿವಿಧ ಆಟೋಟ ಸ್ವರ್ಧೆ, ಸಾಂಸ್ಕ್ರತಿಕ ಕಾರ್ಯಕ್ರಮಗಳು, ಜಾನಪದ ಜಾತ್ರೆ, ಶ್ವಾನ ಪ್ರದರ್ಶನ, ಗಾಳಿಪಟ ಪ್ರದರ್ಶನ, ಮರಳು ಶಿಲ್ಪ, ಚಿತ್ರಕಲೆ ಸ್ವರ್ಧೆ, ಪುರುಷರ ಹೊನಲು ಬೆಳಕಿನ ಅವಿಭಾಜಿತ ಪ್ರೋ ಕಬಡ್ಡಿ ಪಂದ್ಯಾವಳಿ ಹಾಗೂ ಕಲರ್ಸ್ ಕನ್ನಡ ವಾಹಿನಿಯ ಕನ್ನಡ ಕೋಗಿಲೆ ಖ್ಯಾತಿಯ ಹೆಸರಾಂತ ಕಲಾವಿದರಿಂದ ಸಂಗೀತ ರಸಮಂಜರಿ ಹಾಗೂ ಜೀ ಕನ್ನಡ ವಾಹಿನಿಯಲ್ಲಿ ನಡೆಯುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಲಾವಿದರಿಂದ ನೃತ್ಯ ವೈವಿಧ್ಯಮಯ ಕಾರ್ಯಕ್ರಮ, ಅಂತರಾಷ್ಟ್ರಿಯ ಮಟ್ಟದ ಚಿತ್ರ ಕಲಾವಿದರಿಂದ ವರ್ಣ ವಸಂತ ಚಿತ್ರ ಪ್ರದರ್ಶನ ಕಾರ್ಯಕ್ರಮ ಹಾಗೂ ಕೇರಳದ ಹೆಸರಾಂತ ಖ್ಯಾತ ಕಲಾವಿದರಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನಡೆಯಲಿದೆ ಎಂದರು.
ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರವಾಸೋದ್ಯಮ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು

Comments are closed.