ಕರಾವಳಿ

ಮಕ್ಕಳನ್ನು ಸಾಕಲಾಗದೇ ಮಾರಾಟಕ್ಕೆ ಯತ್ನ-ಮಕ್ಕಳ ರಕ್ಷಣಾ ಘಟಕದಿಂದ ರಕ್ಷಣಾ ಕಾರ್ಯಾಚರಣೆ

Pinterest LinkedIn Tumblr

ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಮತ್ತು ನೀರೆ ಗ್ರಾಮ ಪಂಚಾಯತ್ ಸಮಯ ಪ್ರಜ್ಞೆಯಿಂದ 4 ವರ್ಷದ ಬಾಲಕ, 3 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದೆ. ನೀರೆ ಗ್ರಾಮದ ಆನಂದರವರಿಗೆ 2 ಮಕ್ಕಳಿದ್ದು, ಆತನ ಹೆಂಡತಿ, ಮಕ್ಕಳನ್ನು ಬಿಟ್ಟು ಹೋಗಿ ವರ್ಷಗಳೇ ಆಗಿದ್ದು, ಮಕ್ಕಳನ್ನು ಪಾಲನೆ ಪೋಷಣೆ ಮಾಡಲು ಆಗದೇ ಮಾರಾಟಕ್ಕೆ ಪ್ರಯತ್ನಿಸುತ್ತಿರುವುದನ್ನು ಗಮನಿಸಿ ನೀರೆ ಗ್ರಾಮ ಪಂಚಾಯತ್‍ನವರು ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿರುತ್ತಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ನೀರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಂಕಿತ ನಾಯಕ್, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಲೆಕ್ಕಾಧಿಕಾರಿ ವಸಂತ ಪೂಜಾರಿ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Comments are closed.