ಕರಾವಳಿ

ಪರ್ಯಾಯ ಮಹೋತ್ಸವ : ಸರಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಉದ್ಘಾಟನೆ

Pinterest LinkedIn Tumblr

ಉಡುಪಿ: ಪರ್ಯಾಯ ಮಹೋತ್ವದ ಅಂಗವಾಗಿ, ಶ್ರೀಕೃಷ್ಣ ಮಠದ ಮಥುರಾ ಛತ್ರದ ಬಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಿರುವ, ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಶಾಸಕ ರಘುಪತಿ ಭಟ್ ಗುರುವಾರ ಉದ್ಘಾಟಿಸಿದರು.

ವಸ್ತು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ರಘುಪತಿ ಭಟ್, ರಾಜ್ಯ ಸರ್ಕಾರದ ಸಾಧನೆಗಳ ಸಮಗ್ರ ಮಾಹಿತಿ ನೀಡುವ ಈ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುವುದರ ಮೂಲಕ, ರಾಜ್ಯದ ಜನತೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳು ಮತ್ತು ರೂಪಿಸಿರುವ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಕುಮಾರ್ ಸ್ವಾಗತಿಸಿದರು.

ಈ ವಸ್ತು ಪ್ರದರ್ಶನದಲ್ಲಿ, ಪ್ರವಾಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆ, ಸಪ್ತಪದಿ-ಸಾಮೂಹಿಕ ವಿವಾಹ ಕಾರ್ಯಕ್ರಮ, ಐಟಿ ಬಿಟಿ ಉದ್ದಿಮೆಗಳಿಗೆ ನೀಡಿರುವ ಕೊಡುಗೆ, ಮೀನುಗಾರರ ಸಾಲಮನ್ನಾ, ನೇಕಾರರ ಸಾಲ ಮನ್ನಾ, ಕಲ್ಯಾಣ ಕರ್ನಾಟಕ ಪರ್ವಕ್ಕೆ ಚಾಲನೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಅಲ್ಪ ಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಯೋಜನೆಗಳ ಸಮಗ್ರ ಮಾಹಿತಿ ಮತ್ತು ಛಾಯಾಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಆಕರ್ಷಕ ಮುಖದ್ವಾರ ನಿರ್ಮಿಸಲಾಗಿದೆ. ಜನವರಿ 16 ರಿಂದ 18 ರ ವರೆಗೆ 3 ದಿನಗಳ ಕಾಲ ಪ್ರದರ್ಶನ ನಡೆಯಲಿದೆ.

Comments are closed.