ಉಡುಪಿ: ಜಿಲ್ಲಾ ಗೃಹ ರಕ್ಷಕದಳ ಕಾರ್ಕಳ ಘಟಕದ ಗೃಹರಕ್ಷಕ ಶಿವಪ್ರಸಾದ್ ಇವರು, ಜನವರಿ 7 ರಿಂದ 18 ರ ವರೆಗೆ ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ಪ್ರಥಮ ಚಿಕಿತ್ಸೆ ತರಬೇತಿಯಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.

ಇವರನ್ನು ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಇವರು ಗೃಹ ರಕ್ಷಕ ದಳದ ಸಂಸ್ಥೆಯ ವತಿಯಿಂದ ಅಭಿನಂದಿಸಿರುತ್ತಾರೆ ಎಂದು ಜಿಲ್ಲಾ ಗೃಹ ರಕ್ಷಕದಳದ ಪ್ರಕಟಣೆ ತಿಳಿಸಿದೆ.
Comments are closed.