ಕರಾವಳಿ

ಗೃಹರಕ್ಷಕ ಸಿಬ್ಬಂದಿಗಳಿಗೆ ಸಮಾಜದಲ್ಲಿ ಗೌರವ ಸಿಗುವಂತಾಗಲಿ : ಡಾ| ಯು.ಪಿ. ಶಿವಾನಂದ

Pinterest LinkedIn Tumblr

ಮಂಗಳೂರು ಫೆಬ್ರವರಿ 04: ಬೆಳ್ಳಾರೆ ಘಟಕದ ಹೂವಪ್ಪ ಗೌಡ ಇವರನ್ನು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.

ಗೃಹರಕ್ಷಕ ಸಿಬ್ಬಂದಿಗಳು ಸಮಾಜದ ಎಲ್ಲಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ. ಪೊಲೀಸ್ ಇಲಾಖೆಯೊಂದಿಗೆ ಅತ್ಯಂತ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ನುಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸುದ್ದಿ ಸಮೂಹ ಸಂಸ್ಥೆಗಳ ಮಾಲಕ ಡಾ| ಯು.ಪಿ. ಶಿವಾನಂದ ಮಾತನಾಡಿ, ಸಮಾಜದಲ್ಲಿ ಒಳ್ಳೆಯದನ್ನು ಮೊದಲು ಗುರುತಿಸಿದಾಗ ತಪ್ಪುಗಳು ಕಡಿಮೆಯಾಗುತ್ತಾ ಬರುತ್ತವೆ. ಗೃಹರಕ್ಷಕ ಸಿಬ್ಬಂದಿಗಳಿಗೆ ಸಮಾಜದಲ್ಲಿ ಗೌರವ ಸಿಗುವಂತಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಹೂವಪ್ಪ ಗೌಡ ಮಾತನಾಡಿ, ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ನನಗೆ ತುಂಬಾ ಸಂತಸವಾಗಿದೆ ಮತ್ತು ನನ್ನ ಜವಾಬ್ದಾರಿ ಹೆಚ್ಚಾಗಿದ್ದು, ಇನ್ನು ಮುಂದೆ ಗೃಹರಕ್ಷಕ ದಳಕ್ಕಾಗಿ ಇನ್ನಷ್ಟು ಸೇವೆ ಮಾಡುವುದಾಗಿ ತಿಳಿಸಿದರು.

ಬೆಳ್ಳಾರೆ ಠಾಣಾ ಪ್ರೊಬೆಷನರಿ ಉಪನಿರೀಕ್ಷಕ ಆಂಜನೇಯ ರೆಡ್ಡಿ ಬೆಳ್ಳಾರೆ ಜೇಸಿ ಸಂಸ್ಥೆಯ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ಗೃಹರಕ್ಷಕ ದಳ ಬೆಳ್ಳಾರೆ ಘಟಕದ ಹೆಚ್. ನಾರಾಯಣ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಬ್ರಹಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ವಸಂತ ಸ್ವಾಗತಿಸಿದರು. ವೀರನಾಥನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬೆಳ್ಳಾರೆ ಘಟಕದ ಎಲ್ಲ ಗೃಹರಕ್ಷಕರು ಹಾಗೂ ಗೃಹರಕ್ಷಕಿಯರು ಉಪಸ್ಥಿತರಿದ್ದರು.

Comments are closed.