ಕರಾವಳಿ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ : ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆ ದಿನ

Pinterest LinkedIn Tumblr

ಮಂಗಳೂರು : 2019-20ನೇ ಸಾಲಿನಲ್ಲಿ ಈಗಾಗಲೇ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಎನ್‍ಎಸ್‍ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿಯೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ವೆಬ್‍ಸೈಟ್ ssp.postmatric.karnataka.gov.in ನ ಮೂಲಕ ಅರ್ಜಿ ಸಲ್ಲಿಸಬಹುದು. ಎಸ್‍ಎಸ್‍ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎನ್‍ಎಸ್‍ಪಿಯಲ್ಲಿ ಪಡೆದ ಐಡಿ ನಂ. ಕಡ್ಡಾಯವಾಗಿರುತ್ತದೆ.

ಎನ್‍ಎಸ್‍ಪಿ ಮೂಲಕ ಅರ್ಜಿ ಸಲ್ಲಿಸಿ ರಾಜ್ಯ ವಿದ್ಯಾರ್ಥಿ ವೇತನ ತಂತಾಂ್ರಶದಲ್ಲಿ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರುಗೊಳ್ಳುವುದಿಲ್ಲ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.