ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ, ಒತ್ತಡ ರಹಿತವಾಗಿ ಕಾರ್ಯ ನಿರ್ವಹಣೆ ಕುರಿತಂತೆ ಒತ್ತಡದಿಂದ ಸಂತೋಷವಾಗಿ ಕಾರ್ಯ ನಿರ್ವಹಣೆ ವಿಧಾನದ ಬಗ್ಗೆ ಬ್ರಹ್ಮಕುಮಾರಿಯ ರಾಜಯೋಗಿನಿ ಬಿ.ಕೆ.ಶಿವಾನಿ ಅವರಿಂದ ಉಪನ್ಯಾಸ ಕಾರ್ಯಕ್ರಮ ಶುಕ್ರವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.
ನೌಕರರು ಯಾವುದೇ ನಕಾರಾತ್ಮಕ ವಿಷಯಗಳಿಗೆ ಕಿವಿಗೊಡದೇ, ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒಗದಿಸಬೇಕು, ದೈನಂದಿನ ಕರ್ತವ್ಯಗಳಲ್ಲಿ ಒತ್ತಡಕ್ಕೆ ಒಳಗಾಗದೆ ಸಮಚಿತ್ತದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದ ಬಿ.ಕೆ.ಶಿವಾನಿ, ಒತ್ತಡ ನಿವಾರಣೆಯ ವಿಧಾನಗಳ ಬಗ್ಗೆ ವಿವರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಉಡುಪಿ ಬ್ರಹ್ಮಕುಮಾರಿ ಕೇಂದ್ರದ ಬಿ.ಕೆ.ಉಮಾದೇವಿ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ನಿರೂಪಿಸಿದರು.
Comments are closed.