ಕರಾವಳಿ

ಉಡುಪಿ ಕಡಿಯಾಳಿ ದೇವಸ್ಥಾನದಲ್ಲಿ ಸಪ್ತಪದಿ ರಥಕ್ಕೆ ಚಾಲನೆ

Pinterest LinkedIn Tumblr

ಉಡುಪಿ: ಸರಕಾರದ ಯೋಜನೆಯಾದ ಸಪ್ತಪದಿ ಉಚಿತ ಸಾಮೂಹಿಕ ವಿವಾಹದ ಕುರಿತು ವ್ಯಾಪಕ ಅರಿವು ಮೂಡಿಸಲು ಸಂಚರಿಸುವ ಸಪ್ತಪಧಿ ರಥಕ್ಕೆ ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉಡುಪಿ ಕಡಿಯಾಳಿಯ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಪ್ರಶಾಂತ್ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಗಣೇಶ್ ರಾವ್, ಮೊಕ್ತೇಸರ ಶ್ರೀಶ ಉಪಾಧ್ಯಾಯ, ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಕೆ. ಶ್ರೀನಿವಾಸ ಹೆಬ್ಬಾರ್, ನಗರಸಭೆ ಸದಸ್ಯೆ ಗೀತಾ ಶೇಟ್, ಟ್ರಸ್ಟಿ ಆಶಾ ಶ್ರೀನಿವಾಸ, ಜೀರ್ಣೋದ್ಧಾರ ಸಮಿತಿ ಸದಸ್ಯ ವಿಜಯೇಂದ್ರ ರಾವ್ ಉಪಸ್ಥಿತರಿದ್ದರು.

Comments are closed.