ಕರಾವಳಿ

ಕಾಪುವಿನ ಗೃಹರಕ್ಷಕ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ

Pinterest LinkedIn Tumblr

ಉಡುಪಿ: ಜಿಲ್ಲಾ ಗೃಹರಕ್ಷಕದಳ ಕಾಪು ಘಟಕದ ಘಟಕಾಧಿಕಾರಿ ಲಕ್ಷ್ಮೀನಾರಾಯಣ್ ರಾವ್ ಅವರಿಗೆ 2018 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಇವರು 2007 ಜನವರಿ 10 ರಂದು ಇಲಾಖೆಗೆ ಸೇರಿ ಸುಮಾರು 12 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ.

ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ್ ಶೆಟ್ಟಿ ಇವರನ್ನು ಅಭಿನಂದಿಸಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕದಳದ ಪ್ರಕಟಣೆ ತಿಳಿಸಿದೆ.

Comments are closed.