ಕರಾವಳಿ

ಮಾ. 7-8, ರಾಜ್ಯ ಪತ್ರಕರ್ತರ ಸಮ್ಮೇಳನ ; ಡಾ. ವಿರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Pinterest LinkedIn Tumblr

ಧರ್ಮಸ್ಥಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸುವ 35ನೇ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ ಮೊದಲ ಬಾರಿಗೆ ಕರಾವಳಿ ಭಾಗವಾದ ಮಂಗಳೂರಿನಲ್ಲಿ ಮಾ.7 ಮತ್ತು 8ರಂದು ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯುವ ಈ ರಾಜ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಮಾ. 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಿದ ಬಳಿಕ ಅವರು ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದರು.

ಸಮ್ಮೇಳನದ ಆಶಯ ನುಡಿಗಳನ್ನು ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ನಡೆಸಿಕೊಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಉಭಯ ಜಿಲ್ಲೆಯ ಶಾಸಕರುಗಳು, ಇನ್ನೂ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ ಎಂದರು.

ಈ ಸಂದರ್ಭ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾಧ್ಯಕ್ಷ ಶ್ರೀನಿವಾಸ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ , ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಭಾಸ್ಕರ ರೈ ಕಟ್ಟ, ರವಿ ನಾಕಲ್ಗೋಡು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ, ಕಾರ್ಯದರ್ಶಿ ಮನೋಹರ್ ಬೊಳಂಜ, ಶ್ರೀನಿವಾಸ ತಂತ್ರಿ, ಆರ್.ಆನ್. ಪೂವಣಿ, ಧನಕೀರ್ತಿ ಅರಿಗ ಉಪಸ್ಥಿತರಿದ್ದರು.

ವಿಚಾರಗೋಷ್ಠಿಗಳು:

ಕರಾವಳಿ ಭಾಗದ ಪ್ರವಾಸೋಧ್ಯಮ ಮತ್ತು ಅಭಿವೃದ್ಧಿ ಎನ್ನುವ ವಿಚಾರಗೋಷ್ಠಿ ಡಾ.ಬಿ.ಎ.ವಿವೇಕ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಾ. ೮ ರಂದು ಮಹಿಳಾ ದಿನಾಚರಣೆ ಕೂಡ ಇರುವುದರಿಂದ ಆ ದಿನದಲ್ಲಿ ಮಹಿಳೆಯರಿಗೂ ಆಧ್ಯತೆ ನೀಡಿ ರಾಜ್ಯದ ಎಲ್ಲಾ ಪತ್ರಕರ್ತೆಯರನ್ನು ಆಹ್ವಾನಿಸಿ ಮಹಿಳೆಯರಿಗಾಗಿ ಒಂದು ಗೋಷ್ಠಿ ಅಯೋಜಿಸಲಾಗಿದೆ. ಭಾರತೀಯ ಪತ್ರಿಕೋದ್ಯಮದ ಬಗ್ಗೆ ಮಾತನಾಡಲು ದೆಹಲಿ, ಜಾರ್ಖಂಡ್, ಶ್ರೀಲಂಕಾ ಮೊದಲಾದ ವಿವಿಧ ಭಾಗಗಳಿಂದ ಹಿರಿಯ ಪತ್ರಕರ್ತರು ಭಾಗವಹಿಲಿದ್ದಾರೆ. ಕರಾವಳಿಯ ಹಿರಿಯ ಪತ್ರಕರ್ತರೂ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಪ್ರಶಸ್ತಿ-ಪುರಸ್ಕಾರ : ಜೊತೆಗೆ ವಿದ್ಯುನ್ಮಾನ ಮಾಧ್ಯಮ, ಆಕಾಶವಾಣಿ, ಮುದ್ರಣ ಮಾಧ್ಯಮ ಹಾಗೂ ಸಮೂಹ ಮಾಧ್ಯಮಗಳಲ್ಲಿ ಪತ್ರಕರ್ತರಾಗಿ ವೃತ್ತಿಯಲ್ಲಿ ನಿರಂತರ ಸೇವೆಸಲ್ಲಿಸಿ ಕೊಂಡು ಬಂದಿರುವ ಅನೇಕ ಮಹನೀಯರಿಗೆ ಸನ್ಮಾನ -ಪುರಸ್ಕಾರ ನಡೆಯಲಿದೆ. ಪತ್ರಕರ್ತ ವೃತ್ತಿಗೆ ಸಂಬಂಧಿಸಿದಂತೆ ಪ್ರತೀವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳ ವಿತರಣೆ ಕೂಡ ನಡೆಯಲಿದೆ ಎಂದರು.

ಸಮಾರೋಪ ಸಮಾರಂಭಕ್ಕೆ ಮಂತ್ರಿಗಳ ಗಡಣ:

ಮಾ. 8ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಮಾಧು ಸ್ವಾಮಿ, ಗೃಹ ಸಚಿವ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರುಗಳು ಭಾಗಿಯಾಗಲಿದ್ದಾರೆ.

Comments are closed.