ಉಡುಪಿ: ಹಂಗಾರಕಟ್ಟೆಯ ಚೇತನಾ ಪ್ರೌಢಶಾಲೆಯಲ್ಲಿ ಮಾರ್ಚ್ 14 ಮತ್ತು 15 ರಂದು ನಡೆಯುವ, ಉಡುಪಿ ಜಿಲ್ಲಾ 14 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಪೊಲೀಸ್, ಅಗ್ನಿಶಾಮಕ ಹಾಗೂ ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂದಪಟ್ಟ ಇಲಾಖೆಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲಭ್ಯ ನೀಡುವ ಕುರಿತಂತೆ ಹಾಗೂ ಸಮ್ಮೇಳನಕ್ಕೆ ಆಸಕ್ತ ಶಾಲಾ ಮಕ್ಕಳನ್ನು ಕರೆತರುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಮ್ಮೇಳನದಲ್ಲಿ ಸುಮಾರು 2000 ಮಂದಿ ಭಾಗವಹಿಸಲಿದ್ದು, ಅವರ ಊಟೋಪಚಾರದ ಕುರಿತಂತೆ ಜಿಲ್ಲೆಯ ದೇವಾಲಯಗಳಿಂದ ಅಗತ್ಯ ನೆರವು ನೀಡಲಾಗುವುದು ಎಂದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಘಟಕರಿಗೆ ಸೂಚಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಪ್ರಸಿದ್ದ ಸಾಹಿತಿ ವೈದೇಹಿ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಕವಿಗೋಷ್ಠಿ, ವಿದ್ಯಾರ್ಥಿ ಗೋಷ್ಠಿ ಸೇರಿದಂತೆ ವಿವಿಧ ಗೋಷ್ಠಿಗಳು ಮತ್ತು ಚರ್ಚೆಗಳು ನಡೆಯಲಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ದಯ್ಯರೇ ದಯ್ಯ ಜನಪದ ಸಂಗಮ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದರು.
ಸಭೆಯಲ್ಲಿ ಎಎಸ್ಪಿ ಕುಮಾರ ಚಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ, ಸಂಘಟನಾ ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ, ಕಾಪು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಪುಂಡಲೀಕ ಮರಾಠೆ, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಬ್ರಹ್ಮಾವರ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಜ್ಯೋತಿ ಗುರುಪ್ರಸಾದ್, ಭುವನ ಪ್ರಸಾದ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Comments are closed.