ಮಂಗಳೂರು: ಪತ್ರಕರ್ತರ ರಾಜ್ಯ ಸಮ್ಮೇಳನದ ಪ್ರಚಾರ ವಾಹನಕ್ಕೆ ದ.ಕ. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್. ಸೋಮವಾರ ಪ್ರೆಸ್ ಕ್ಲಬ್ ಮುಂಭಾಗದಲ್ಲಿ ಚಾಲನೆ ನೀಡಿದರು.
ಈ ಪ್ರಚಾರ ವಾಹನ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಗೆ 5 ದಿನಗಳ ಕಾಲ ತೆರಳಿ ಪ್ರಚಾರ ನಡೆಸಲಿದೆ.
ಈ ಪ್ರಚಾರ ವಾಹನಕ್ಕೆ ಚಾಲನೆ ನೀಡಿದ ಡಾ.ಸೆಲ್ವಮಣಿ ಆರ್. ಮಾತನಾಡಿ, ಮಾರ್ಚ್ 7 ಹಾಗೂ 8 ರಂದುಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ 35ನೇ ಪತ್ರಕರ್ತರ ಸಮ್ಮೇಳನ ನಗರದ ಪುರಭವನದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಗಿದೆ. ಈ ವಾಹನ ಬೇರೆ ಬೇರೆ ಊರುಗಳಿಗೆ ತೆರಳಿ ಸಮ್ಮೇಳನಕ್ಕೆ ಹೆಚ್ಚಿನ ಪ್ರಚಾರ ಸಿಗುವಂತಾಗಲಿ ಎಂದು ಹೇಳಿದರು .ಮಂಗಳೂರುನಲ್ಲಿ ನಡೆಯುವ. ಈ ರಾಜ್ಯ ಮಟ್ಟದ ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು .
ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ, ಸಮ್ಮೇಳನ ಸಮಿತಿ ಸಂಚಾಲಕ ಜಗನಾಥ್ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ, ನಿಸರ್ಗ ಪಬ್ಲಿಸಿಟಿಯ ಮಂಜುನಾಥ್, ಪತ್ರಕರ್ತರಾದ ವಿಜಯ ಪಡು, ಆರೀಫ್ ಪಡುಬಿದ್ರೆ, ಆರ್.ಸಿ.ಭಟ್, ಭಾಸ್ಕರ ಕಟ್ಟ ಮತ್ತಿತರರು ಉಪಸ್ಥಿತರಿದ್ದರು.
Comments are closed.