ಉಡುಪಿ: ಮಂಗಳವಾರ ಇಸ್ರೇಲ್ನಿಂದ ಉಡುಪಿಗೆ ಆಗಮಿಸಿರುವ ಸುಮಾರು 75 ವರ್ಷದ ವ್ಯಕ್ತಿಗೆ ಕೆಮ್ಮು ಹಾಗೂ ಶೀತದ ತೊಂದರೆಯಿರುವ ಖಚಿತ ಮಾಹಿತಿ ಅನ್ವಯ ಆತನ ಮನೆಗೆ ಬೇಟಿ ನೀಡಿ, ರೋಗ ಲಕ್ಷಣಗಳ ಹಿನ್ನೆಲೆ ಆತನನ್ನು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದು, ಥ್ರೋಟ್ ಸ್ವಾಬ್ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಆತನನಿಗೆ ಕೊರೊನಾ ಸೋಂಕು ಇದೆಯೋ ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಂಡು ಮುಂದಿನ ಚಿಕಿತ್ಸೆ ಕುರಿತು ಆಲೋಚಿಸಲಾಗುವುದು ಎಂದು ಡಿಹೆಚ್ಓ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದರು.

ಉಡುಪಿಯಲ್ಲಿ ಶಂಕಿತ ಕೊರೊನಾ ವೈರಸ್ ಪೀಡಿತ ರೋಗಿಗಳನ್ನು ದಾಖಲು ಮಾಡಲು ಜಿಲ್ಲಾ ಆಸ್ಪತ್ರೆಯಲ್ಲಿ 5 ಹಾಸಿಗೆಗಳುಳ್ಳ ಪ್ರತ್ಯೇಕ ವಾರ್ಡ್ಗಳಲ್ಲಿ 3 ವೆಂಟಿಲೇಟರ್ ಸಹಿತ 2 ಐಸಿಯುಗಳ ವ್ಯವಸ್ಥೆ ಮಾಡಿದ್ದು, ತಾಲೂಕು ಆಸ್ಪತ್ರ ಕುಂದಾಪುರ ಮತ್ತು ಕಾರ್ಕಳದಲ್ಲಿ 3 ಬೆಡ್ ನ ಐಸೋಲೇಷನ್ ವಾರ್ಡ್ ವ್ಯವಸ್ಥೆ ಮಾಡಲಾಗಿದ್ದು,ಜಿಲ್ಲಾ ಸರ್ವೇಕ್ಷಣಾ ಘಟಕದ ಪ್ರಯೋಗ ಶಾಲೆಯಿಂದಲೇ ಶಂಕಿತ ರೋಗಿಗಳ ಥ್ರೋಟ್ ಸ್ವಾಬ್ಗಳ ಮಾದರಿ ಸಂಗ್ರಹಿಸಿ ಬೆಂಗಳೂರಿಗೆ ಕಳುಹಿಸುವುದರಿಂದ ಶಂಕಿತ ರೋಗಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡುವಂತೆ ಮನವಿ ಮಾಡಿದರು.
Comments are closed.