ಕರಾವಳಿ

ಕಾನ್ಸ್ಟೆಬಲ್ ನೇಮಕಾತಿ: ಉಡುಪಿ ಜಿಲ್ಲಾ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳನ್ನು ತುಂಬುವ ಕುರಿತು ಮಾರ್ಚ್ 11 ಮತ್ತು 12 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ದೇಹದಾಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ ನಡೆಯಲಿದೆ.

(ಸಾಂದರ್ಭಿಕ ಚಿತ್ರ)

ಈ ಪರಿಕ್ಷಾ ದಿನಗಳಂದು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Comments are closed.