ಉಡುಪಿ: ಜಿಲ್ಲೆಯಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 13,005 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಲೆಕ್ಕಶಾಸ್ತ್ರ (ಅಕೌಂಟೆನ್ಸಿ) ಪರೀಕ್ಷೆಗೆ ನೊಂದಾಯಿಸಿದ್ದ 8111 ಮಂದಿ ವಿದ್ಯಾರ್ಥಿಗಳಲ್ಲಿ 8014 ಮಂದಿ ಪರೀಕ್ಷೆ ಬರೆದಿದ್ದು, 97 ಮಂದಿ ಗೈರು ಹಾಜರಾಗಿದ್ದಾರೆ. ಗಣಿತ ಪರೀಕ್ಷೆಗೆ 5025 ಮಂದಿ ಹೆಸರು ನೊಂದಾಯಿಸಿದ್ದು, 4991 ಮಂದಿ ಪರೀಕ್ಷೆ ಬರೆದಿದ್ದು, 34 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
Comments are closed.