ಉಡುಪಿ: ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಕೊರನಾ ಕಾರಣವಲ್ಲವೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟ ಪಡಿಸಿದ್ದಾರೆ.
ಮೃತರು ಮೂಲತಃ ಪಂಜಾಬ್ ನವರಾಗಿದ್ದು, ನವೆಂಬರ್ ನಿಂದ ಹೊಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದರು.
ಇವರ ಸಾವಿಗೆ ಕೊರೊನಾ ಕಾರಣವಲ್ಲವಾಗಿದ್ದು, ಈ ಬಗ್ಗೆ ಅನಗತ್ಯವಾಗಿ ಸುದ್ದಿ ಹರಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಜಿಲ್ಲಾಧಿಕಕಾರಿ ಜಿ.ಜಗದೀಶ್, ಸಾರ್ವಜನಿಕರು ಯಾವುದೇ ಅನಗತ್ಯ ವದಂತಿ ಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.
Comments are closed.