ಬೆಂಗಳೂರು: ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಏಳನೇ, ಎಂಟನೇ ಮತ್ತು ಒಂಬತ್ತನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಿ ಪರೀಕ್ಷೆಯ ಮುಂದಿನ ದಿನಾಂಕವನ್ನು ಸೂಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಸರಕಾರ ಆದೇಶಿಸಿತ್ತು. ಆರನೇ ತರಗತಿಯವರೆಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಬೇಕಿಲ್ಲ. ಆದರೆ ಉಳಿದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮಾತ್ರ ಹಾಜರಾಗಬೇಕು ಎಂದು ಆದೇಶಿಸಲಾಗಿತ್ತು. ಆದರೆ ಈಗ 7,8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಯನ್ನೂ ಮುಂದೂಡಲಾಗಿದೆ.
10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಗಳು ಯಥಾಸ್ಥಿತಿಯಂತೆ ನಡೆಯಲಿದೆ.
Comments are closed.