ಕರಾವಳಿ

ಉಡುಪಿ ಜಿಲ್ಲೆಯಲ್ಲಿ 1000 ಕ್ಕೂ ಅಧಿಕ ಮಂದಿ ಹೋಂ ಕ್ವಾರಂಟೈನ್: ಮನೆಯಿಂದ ಹೊರ ಬಾರದಂತೆ ಡಿಸಿ ಆದೇಶ

Pinterest LinkedIn Tumblr

ಉಡುಪಿ: ವಿದೇಶದಿಂದ ಉಡುಪಿ ಜಿಲ್ಲೆಗೆ ಸುಮಾರು 1000 ಜನರು ಆಗಮಿಸಿ ಈಗಾಗಲೇ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಜಿಲ್ಲಾಡಳಿತದ, ಆರೋಗ್ಯ ಇಲಾಖೆ ಮತ್ತು ಇತರ ಅಧಿಕಾರಿಗಳು ಸುತ್ತಮುತ್ತಲಿನ ಮನೆಗಳಿಗೆ ನೋಟೀಸ್ ನೀಡುವ ಮೂಲಕ ಮಾಹಿತಿ ನೀಡಿದ್ದಾರೆ. ಅದಲ್ಲದೇ ಅಂತವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಮನೆಯಿಂದ ಹೊರಗೆ ಬಾರದಂತೆ ವಿನಂತಿಸಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಗುರುವಾರ ಮಾಹಿತಿ ನೀಡಿದ್ದಾರೆ.

ಹೋಮ್ ಕ್ವಾರಂಟೈನ್ ಅವಧಿ ಮುಗಿಯುವ ತನಕ ಕಟ್ಟುನಿಟ್ಟಾಗಿ ಹೊರಗಡೆ ಬರುವಂತಿಲ್ಲ. ಇದನ್ನು ಉಲ್ಲಂಘಿಸಿ ಅಂತಹ ವ್ಯಕ್ತಿಗಳು ಸುತ್ತಾಡುವುದನ್ನು ಯಾರಾದರೂ ಗಮನಿಸಿದರೆ, ಅಕ್ಕಪಕ್ಕದ ಮನೆಯವರು 9480242600 ಸಂಖ್ಯೆಗೆ ದೂರನ್ನು ನೀಡಬಹುದು. ಅಂತಹ ವ್ಯಕ್ತಿಗಳ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೋಮ್ ಕ್ವಾರಂಟೈನ್ ನಲ್ಲಿರುವವರಿಗೆ ಜಿಲ್ಲಾಧಿಕಾರಿಯವರು ಎಚ್ಚರಿಸಿದ್ದಾರೆ.

ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಹೊರಗಡೆ ಬಂದರೆ ಬೇರೆಯವರಿಗೆ ತೊಂದರೆ ಉಂಟಾಗುತ್ತದೆ. ಆದುದರಿಂದ ಎಲ್ಲರೂ ಕೋವಿಡ್-19 ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Comments are closed.