ಕರಾವಳಿ

ಕಾರ್ಮಿಕರ ದಿನದ ಪ್ರಯುಕ್ತ ಕೂಲಿ ಕಾರ್ಮಿಕರಿಗೆ ವಿಶೇಷ ಪಾರ್ಸೆಲ್ ಊಟದ ವ್ಯವಸ್ಥೆ!

Pinterest LinkedIn Tumblr

ಉಡುಪಿ: ಲಾಕ್ ಡೌನ್ ಆರಂಭವಾದ ದಿನದಿಂದ ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಹಾಗೂ ವಿವಿಧ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಬಡ ಕೂಲಿ ಕಾರ್ಮಿಕರಿಗೆ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಇವತ್ತಿನವರೆಗೆ ಉಚಿತ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ನಿನ್ನೆ ವಿಶೇಷವಾಗಿ ಪಾರ್ಸೆಲ್ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಈ ಕಾರ್ಯಕ್ರಮಕ್ಕೆ ಉಡುಪಿಯ ಶಾಸಕ ಕೆ. ರಘುಪತಿ ಭಟ್ ರವರು ಚಾಲನೆಯನ್ನು ನೀಡಿದರು.

ಈ ಸಂದರ್ಭ ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮತ್ತು ವಿವಿಧ ಮೀನುಗಾರಿಕಾ ಸಂಘದ ಅಧ್ಯಕ್ಷರು ಹಾಗೂ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಸಕರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು.

Comments are closed.