ಕರಾವಳಿ

ಕ್ವಾರಂಟೈನ್ ವಿಧಾನ ಕುರಿತು ಹೋಟಲ್ ಮಾಲೀಕರು ಮತ್ತು ಕಾರ್ಮಿಕರಿಗೆ ತರಬೇತಿ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಗೆ ಹೊರರಾಜ್ಯ ಮತ್ತು ವಿದೇಶಗಳಿಂದ ಬರುವವರನ್ನು , ಜಿಲ್ಲೆಯ ವಿವಿಧ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಗೊಳಿಸಬೇಕಿದ್ದು, ಈ ಕುರಿತಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರ ಸೂಚನೆಯಂತೆ , ಜಿಲ್ಲೆಯ ಎಲ್ಲಾ ಹೋಟೆಲ್ ಗಳ ಮಾಲೀಕರು ಮತ್ತು ಅಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಮಂಗಳವಾರ ಉಡುಪಿಯ ಪುರಭವನದಲ್ಲಿ ತರಬೇತಿ ನೀಡಲಾಯಿತು.

ಜಿಲ್ಲಾಡಳಿತದಿಂದ ಅನುಮತಿ ಪಡೆದು ಹೋಟೆಲ್ ಗಳಲ್ಲಿ ಕ್ವಾರಂಟೈನ್ ಆಗಲು ಬರುವವವರಿಗೆ ಒದಗಿಸಬೇಕಾದ ಸೌಲಭ್ಯಗಳು, ಹೋಟೆಲ್ ಗಳ ಮಾಲೀಕರು ಮತ್ತು ಸಿಬ್ಬಂದಿಗಳು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು , ಹೋಟೆಲ್ ಗಳಲ್ಲಿ ಸ್ವಚ್ಛತೆ ಕಾಪಾಡುವ ವಿಧಾನಗಳು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಕುರಿತಂತೆ ವಿವಿರವಾಗಿ ತರಬೇತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ , ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಕೋವಿಡ್-19 ಕುರಿತ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ ಮತ್ತು ಡಾ. ದಿವ್ಯಾ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.
ಜಿಲ್ಲೆಯ ವಿವಿಧ ಹೋಟೆಲ್ ಗಳ ಮಾಲೀಕರು ಮತ್ತು ಸಿಬ್ಬಂದಿ ತರಬೇತಿಯಲ್ಲಿ ಉಪಸ್ಥಿತರಿದ್ದರು.

Comments are closed.