ಕರಾವಳಿ

ಹೂವಿನ ಬೆಳೆಗಾರರಿಗೆ ನಷ್ಠ ಪರಿಹಾರ- ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಕೋವಿಡ್-19 ರ ಕಾರಣ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್ ನಿಂದ , ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ರೂ. 25,000 ಪರಿಹಾರವನ್ನು ಗರಿಷ್ಟ 1.00 ಹೆಕ್ಟೇರ್ ವಿಸ್ತೀರ್ಣಕ್ಕೆ ಮುಖ್ಯಮಂತ್ರಿಯವರು ಘೋಷಿಸಿದ್ದು, ಪ್ರಸ್ತುತ ಸದರಿ ಘೋಷಿಸಿರುವ ಪರಿಹಾರವನ್ನು ರೈತರಿಗೆ ಪಾವತಿಸುವ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ.

ಪರಿಹಾರವನ್ನು 2019-20 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯ ಆಧಾರದಲ್ಲಿ ಪಾವತಿಸಲಾಗುವುದು. ರೈತರು ತಾವು ಬೆಳೆದಿರುವ ಬಹು ವಾರ್ಷಿಕ ಪುಷ್ಪ ಬೆಳೆಯು 2019-20 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಹಾಗೂ ವಾರ್ಷಿಕ ಪುಷ್ಪ ಬೆಳೆಗಳು 2019-20 ನೆ ಸಾಲಿನ ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಸಂಬಂದಿಸಿದ ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗಳಲ್ಲಿ ಪರಿಶೀಲಿಸಿಕೊಳ್ಳುವುದು.

ರೈತರು ಈಗಾಗಲೇ ಇಲಾಖೆಯ FRUITS ತಂತ್ರಾಂಶದಲ್ಲಿ ನೋಂದಣಿಯಾಗಿದ್ದರೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು, ಬೆಳೆ ಸಮೀಕ್ಷೆಯಲ್ಲಿ ಪುಷ್ಪ ಬೆಳೆ ದಾಖಲಾಗದ ರೈತರು ಅರ್ಜಿ, ಪಹಣಿ, ಆಧಾರ್ ನ ಪ್ರತಿ , ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗೆ ಸಲ್ಲಿಸುವುದು, ಸದರಿ ಅರ್ಜಿದಾರರ ಸ್ಥಳ ಪರಿಶೀಲನೆಯನ್ನು ಜಂಟಿ ಪರಿಶೀಲನಾ ತಂಡದಿಂದ ಕೈಗೊಂಡು ನಿಯಮಾನುಸಾರ ಪರಿಹಾರವನ್ನು ಪಾವತಿಸಲಾಗುವುದು,

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿಪಂ), ಉಡುಪಿ ಜಿಲ್ಲೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಉಡುಪಿ ತಾಲೂಕು: 0820-2522837 , ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಕುಂದಾಪುರ ತಾಲೂಕು: 08254-230813, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕಾರ್ಕಳ ತಾಲೂಕು 08258-230288 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.