ಕರಾವಳಿ

ಉಡುಪಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ: ನಾಲ್ವರ ಬಂಧನ

Pinterest LinkedIn Tumblr

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉಡುಪಿ ನಗರ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ನಯಂಪಳ್ಳಿ ನಿವಾಸಿ ಗಾಡವಿನ್(24), ಗ್ಲ್ಯಾಡವಿನ್(21), ಸಮೀತ್ (19) ಮತ್ತು ಕ್ಯಾರೆನ್ (22) ಎಂದು ಗುರುತಿಸಲಾಗಿದೆ.

ಮೇ14ರಂದು ಉಡುಪಿ ನಗರ ಪೊಲೀಸ್ ಉಪ ನಿರೀಕ್ಷಕರಾದ ಸಕ್ತಿವೇಲು ಇವರಿಗೆ ದೊರೆತ ಮಾಹಿತಿ ಮೇರೆಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಬಿಷಪ್ ಹೌಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಬಂಧಿತರಿಂದ ರೂ 25000 ಮೌಲ್ಯದ 1ಕೆಜಿ 107 ಗ್ರಾಂ ಗಾಂಜಾ, ನಗದು ರೂ 500, 3 ಮೊಬೈಲ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ ನೊಂದಣಿ ಸಂಖ್ಯೆ ಇಲ್ಲದ ರೂ 15000 ಮೌಲ್ಯದ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಕಲಂ: 8(c),20(b)(ii)(b) NDPS ACT ರಂತೆ ಪ್ರಕರಣ ದಾಖಲಾಗಿದೆ.

Comments are closed.