ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆ: ಹಳದಿ ಅಲರ್ಟ್; ಸಾರ್ವಜನಿಕರಿಗೆ ಸೂಚನೆ

Pinterest LinkedIn Tumblr

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ,

ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರ ಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿರುತ್ತದೆ, ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.

ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯಬಾರದು, ಮಕ್ಕಳು ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ , ಕಟ್ಟಡ/ಮರಗಳ ಕೆಳಗೆ ನಿಲ್ಲದೆ , ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ.1077 , ದೂ.ಸಂ. 0820-2574802 ಸಂಪರ್ಕಿಸುವoತೆ ಹಾಗೂ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

Comments are closed.