ಕರಾವಳಿ

ಜೂ.8 ರಿಂದ ದೇವಸ್ಥಾನಗಳಲ್ಲಿ ಭಕ್ತರಿಗೆ ದರ್ಶನ, ಸೇವಾ ಕೈಂಕರ್ಯಕ್ಕೆ ಅವಕಾಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Pinterest LinkedIn Tumblr

ಉಡುಪಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಸಹಿತ ಎಲ್ಲಾ ದೇವಸ್ಥಾನಗಳನ್ನು ತೆರೆದು ಭಕ್ತರಿಗೆ ಪೂಜೆ ಪುನಸ್ಕಾರ ಮತ್ತು ದರ್ಶನದ ಬಗ್ಗೆ ಅವಕಾಶ ಮಾಡಿಕೊಡುವ ದಿನಾಂಕವನ್ನು ಜೂನ್ 8 ಕ್ಕೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿಯರು ಮಾಧ್ಯಮದ ಮೂಲಕ ಹೇಳಿಕೆ ನೀಡಿದ್ದಾರೆ.

ಈ ಮೊದಲು ಜೂನ್ 1ಕ್ಕೆ ತೆರೆಯಬೇಕೆಂದು ನಿರ್ಧರಿಸಲಾಗಿದ್ದರೂ, ಕೇಂದ್ರ ಸರ್ಕಾರ ನೀಡಿರುವ ನೂತನ ಮಾರ್ಗಸೂಚಿಯ ಮೇರೆಗೆ ಜೂನ್ 8 ಕ್ಕೆ ಮುಂದೂಡಲಾಗಿದ್ದು, ಎಲ್ಲಾ ಭಕ್ತರು ಸಹಕರಿಸಬೇಕಾಗಿ ಕೋಟ ಶ್ರೀನಿವಾಸ ಪೂಜಾರಿಯವರು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

8 ನೇ ತಾರೀಕಿನಂದು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನಗಳನ್ನು ತೆರೆಯಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಲಾಖಾ ಅಧಿಕಾರಿಗಳಿಗೆ ಮಾರ್ಗಸೂಚಿ ತಯಾರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಮಾನ್ಯ ಹಿಂದು ಧಾರ್ಮಿಕ ದತ್ತಿ ಪ್ರಶಸ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಹೇಳಿಕೆಯ ಮೇರೆಗೆ ಜೂನ್ 8ಕ್ಕೆ ದೇವಸ್ಥಾನ ತೆರೆಯುವುದು ನಿಶ್ಚಯವಾಗಿದೆ.

Comments are closed.