ಕರಾವಳಿ

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಬಂದಿದ್ದ ಗಂಗೊಳ್ಳಿ ಮಹಿಳೆಗೆ ಕೊರೋನಾ; ಮನೆಗಳು ಸೀಲ್ ಡೌನ್

Pinterest LinkedIn Tumblr

ಕುಂದಾಪುರ: ಕ್ವಾರಂಟೈನ್ ಮುಗಿಸಿದ ಬಳಿಕ ಸರಕಾರದ ಆದೇಶದ ಹಿನ್ನಲೆ ಮನೆಗೆ ಬಂದ ಗಂಗೊಳ್ಳಿ ಗ್ರಾಮದ ಮಹಿಳೆಯೋರ್ವಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಗಂಗೊಳ್ಳಿ ಗ್ರಾಮದ ವೆಂಕಿಮನೆ ಪ್ರದೇಶವನ್ನು ಗುರುವಾರ ಸೀಲ್‌ಡೌನ್ ಮಾಡಲಾಗಿದೆ.

ಗಂಗೊಳ್ಳಿ ಗ್ರಾಮದ ವೆಂಕಿಮನೆ ಸಮೀಪದ ಮನೆಗೆ ಮಹಾರಾಷ್ಟ್ರದಿಂದ ಆಗಮಿಸಿದ ಮಹಿಳೆಯೋರ್ವರ ವರದಿಯು ಪಾಸಿಟಿವ್ ಬಂದಿದ್ದು ಇದೀಗ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಿಮನೆ ಸಮೀಪದ 100 ಮೀಟರ್ ವ್ಯಾಪ್ತಿಯ ಎಂಟು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ ಇವರು ಹೆಮ್ಮಾಡಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದು ರಿಪೋರ್ಟ್ ಲಭ್ಯವಾಗುವ ಮುನ್ನವೇ ಮನೆಗೆ ಬಂದಿದ್ದು, ಜೂ.೩ ರಂದು ಇವರಿಗೆ ಕರೊನಾ ಪಾಸಿಟಿವ್ ಇದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ಡಿ. ಅವರು ಕಂಟೈನ್‌ಮೆಂಟ್ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸೀಲ್ ಡೌನ್ ಮಾಡಿದ ಸ್ಥಳಕ್ಕೆ ಯಾರೂ ಪ್ರವೇಶಿಸುವಂತಿಲ್ಲ ಮತ್ತು ಮನೆಯವರು ಯಾರು ಹೊರಗೆ ಬರುವಂತಿಲ್ಲ ಎಂದು ಸೂಚನೆ ನೀಡಿದರು.

ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಎಸ್.ಪೂಜಾರಿ, ಪಿಡಿ‌ಒ ಚಂದ್ರಶೇಖರ, ಕಾರ್ಯದರ್ಶಿ ದಿನೇಶ ಶೇರುಗಾರ್, ಟಾಸ್ಕ್‌ಪೋರ್ಸ್ ಸದಸ್ಯ ಬಿ.ರಾಘವೇಂದ್ರ ಪೈ, ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಪೊಲೀಸ್ ಸಿಬ್ಬಂದಿ ಸಂಪತ್, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Comments are closed.