ಕರಾವಳಿ

ಬುಧವಾರವೂ ಬುದ್ದಿವಂತರ ಜಿಲ್ಲೆ ಉಡುಪಿಗೆ ‘ಬಿಗ್ ರಿಲೀಫ್’ ನೀಡಿದ ಕೊರೋನಾ

Pinterest LinkedIn Tumblr

ಉಡುಪಿ: ಉಡುಪಿಯಲ್ಲಿ ಎರಡು ವಾರಗಳಿಂದ ನಿತ್ಯವೂ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು ಬುದ್ದಿವಂತರ ಜಿಲ್ಲೆ ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು ಹೊಸ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.

ಮಂಗಳವಾರವೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದೇ ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಮಂಗಳವಾರದಂದು ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 103 ಮಂದಿ ನೆಗೆಟಿವ್ ರಿಪೋರ್ಟ್ ಹಿನ್ನಲೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಸದ್ಯ ಜಿಲ್ಲೆಯಲ್ಲಿ 947 ಕೊರೋನಾ ಸೋಂಕಿನ ಪ್ರಕರಣ ದಾಖಲಾಗಿದ್ದು ಬುಧವಾರ 93 ಮಂದಿ ಡಿಶ್ಚಾರ್ಜ್ ಆಗಿದ್ದಾರೆ. ಈವರೆಗೆ 327 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು 619 ಸಕ್ರೀಯ ಪ್ರಕರಣಗಳಿದೆ.

Comments are closed.