ಉಡುಪಿ: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಜೂನ್ 18 ರಂದು , ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡಬೇಕಿದೆ.
ಈ ಹಿನ್ನೆಲೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸಹ ಸೂಚಿಸಲಾಗಿದೆ.
Comments are closed.