ಕರಾವಳಿ

ಕುಂದಾಪುರ ಎಪಿಎಂಸಿ ನೂತನ ಅಧ್ಯಕ್ಷರಾಗಿ ವೆಂಕಟ ಪೂಜಾರಿ, ಉಪಾಧ್ಯಕ್ಷರಾಗಿ ವಸಂತ್ ಕುಮಾರ್ ಶೆಟ್ಟಿ ಕೆದೂರು ಆಯ್ಕೆ

Pinterest LinkedIn Tumblr

ಕುಂದಾಪುರ: ಕುಂದಾಪುರ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆಯ (ಎಪಿಎಂಸಿ) ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಬೈಂದೂರಿನ ವೆಂಕಟ ಪೂಜಾರಿ ಸಸಿಹಿತ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗೆ ನೂತನ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ವಸಂತಕುಮಾರ್ ಶೆಟ್ಟಿ ಕೆದೂರು ಆಯ್ಕೆಯಾಗಿದ್ದಾರೆ.

ಕುಂದಾಪುರ ತಹಶೀಲ್ದಾರ್ ಕೆ. ಆನಂದಪ್ಪ ನಾಯ್ಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ಶಂಕರ ಅಂಕದಕಟ್ಟೆ, ದೀಪಕಕುಮಾರ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ ಹಾಗೂ ಮಾಜಿ ಸದಸ್ಯ ಮಂಜು ಬಿಲ್ಲವ ಅಭಿನಂದಿಸಿದ್ದಾರೆ.

Comments are closed.