ಉಡುಪಿ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು ,ಅಗ್ನಿಶಾಮಕ ಚಾಲಕರ 227 ಹುದ್ದೆಗಳು ,ಚಾಲಕ ತಂತ್ರಜ್ಙರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ನೇಮಕಾತಿ ಒಳಗೊಂಡಿದೆ.

(File Photo)
ಅಂತರ್ಜಾಲ ತಾಣ http://www.ksp.gov.in ಲಾಗ್ ಇನ್ ಆಗಿ ಜೂನ್ 22 ರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.