ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 14 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1139ಕ್ಕೆ ಏರಿಕೆಯಾಗಿದೆ.

ಹೆಜಮಾಡಿ ಕೋಡಿಯ ವ್ಯಕ್ತಿಯು ಜ್ವರ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ. ಪರೀಕ್ಷೆ ವೇಳೆ ಈತನಿಗೂ ಕೋವಿಡ್-19 ಸೋಂಕು ಇರುವುದು ದೃಢವಾಗಿತ್ತು. ಸದ್ಯ ಈತನ ಸಂಪರ್ಕದಿಂದ ಹತ್ತು ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 1038 ಮಂದಿ ಸೋಂಕಿತರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 99 ಸಕ್ರಿಯ ಕೋವಿಡ್-19 ಸೋಂಕು ಪ್ರಕರಣಗಳಿವೆ. ಇವರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Comments are closed.